ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮುಂಜಾನೆ ಕನಕಪುರ ತಾಲೂಕಿನ ದೊಡ್ಡಮುದವಾಡಿ ಗ್ರಾಮದ ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಯುವಕ ಗಾಯಗೊಂಡಿದ್ದಾನೆ.
ಇಂದು ಬೆಳಗ್ಗೆ ನಿದ್ರೆಗೆ ಜಾರಿದ ಚಾಲಕ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ವಿನಯ್ (24) ಎಂಬ ಯುವಕ ತಕ್ಷಣವೇ ಸಾವನ್ನಪ್ಪಿದ್ದು, ಅನಿಕೇತ್ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.