ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ ಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 10 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 19 ಜನರು ಗಾಯಗೊಂಡಿದ್ದು, 10 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬೊಲೆರೊ ಕಾರು ಬಸ್‌ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿವೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ, ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!