August 30, 2026
Sunday, August 30, 2026
spot_img

ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಬೆಳ್ಳಿಪರದೆಯ ಖಳನಟ ವಿಧಿಯಾಟಕ್ಕೆ ಬಲಿ

ಹೊಸದಿಗಂತ ಮಡಿಕೇರಿ:

ಕೊಡಗು ಜಿಲ್ಲೆಯ ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನ್ನಡದ ಪೋಷಕ ನಟ ಹರೀಶ್ (42) ಅವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆಯ ಕಲ್ಲೂರು ನಿವಾಸಿಯಾದ ಹರೀಶ್ ಅವರು ಶನಿವಾರ ರಾತ್ರಿ ಕುಶಾಲನಗರದಿಂದ ತಮ್ಮ ಮನೆಗೆ ವ್ಯಾಗನರ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಆನೆಕಾಡು ಎಂಬಲ್ಲಿ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಗೊಬ್ಬರ ತುಂಬಿದ ಕ್ಯಾಂಟರ್ ಲಾರಿಗೆ ಇವರ ಕಾರು ಹಿಂದಿನಿಂದ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಹರೀಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತ ಹರೀಶ್ ಅವರು ಕೇವಲ ನಟರಷ್ಟೇ ಅಲ್ಲದೆ, ರಿಯಲ್ ಎಸ್ಟೇಟ್ ಉದ್ಯಮದಲ್ಲೂ ಗುರುತಿಸಿಕೊಂಡಿದ್ದರು. ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಚಲನಚಿತ್ರಗಳು ಹಾಗೂ ಕಿರುಚಿತ್ರಗಳಲ್ಲಿ ಖಳನಟನಾಗಿ ಅಭಿನಯಿಸಿ ಗಮನ ಸೆಳೆದಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !