ಹಳ್ಳಕ್ಕೆ ಬಿದ್ದ ಕಾರಿನಲ್ಲಿ ದಿಢೀರ್ ಬೆಂಕಿ, ಕಾರಿನ ಸಮೇತ ಚಾಲಕ ಸಜೀವದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾರೊಂದು ಹಳ್ಳಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡು ಕಾರು ಸಮೇತ ಸುಟ್ಟು ಕರಕಲಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗೊಲಪಲ್ಲಿ ಗ್ರಾಮದಲ್ಲಿ ನಡೆದಿದೆ.

ಇಬ್ರಾಹಿಂ (48) ಮೃತ ದುರ್ದೈವಿ. ಕೆಲಸ ಮುಗಿಸಿ ಓಮ್ನಿಯಲ್ಲಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಕಾರು ಹಳ್ಳಕ್ಕೆ ಹಾರಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಮತ್ತು ಕಾರು ಸುಟ್ಟು ಕರಕಲಾಗಿದೆ. ಮೃತದೇಹವನ್ನು ಚಿಂತಾಮಣಿ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ.

ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!