ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ತಿರುಪತಿ ದೇಗುಲದಲ್ಲಿ ದರುಶನಕ್ಕಾಗಿ ಟಿಕೆಟ್ ತೆಗೆದುಕೊಂಡಿದ್ದ ಬೆಂಗಳೂರಿನ ಕುಟುಂಬ ಲೇಟಾಗಿದೆ ಎಂದು ಓವರ್ ಸ್ಪೀಡ್ನಲ್ಲಿ ಗಾಡಿ ಓಡಿಸಿದ್ದಾರೆ.
ತಂದೆ, ತಾಯಿ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ.
ಪಲಮನೇರ್ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ಸು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ನಿಂತಿತ್ತು. ಈ ವೇಳೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲೇ ಮೃತದೇಹಗಳು ಸಿಲುಕಿಕೊಂಡಿದ್ದವು. ಚಾಲಕನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪೊಲೀಸರು ಬೆಂಗಳೂರು ಮೂಲದ ದಂಪತಿಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.



