Tuesday, August 16, 2022

Latest Posts

ಮರವಂತೆಯಲ್ಲಿ ರಸ್ತೆ ಬಿಟ್ಟು ಸಮುದ್ರಕ್ಕೆ ಹಾರಿದ ಕಾರು: ಇಬ್ಬರ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಕಾರೊಂದು ಅಪಘಾತಕ್ಕೀಡಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ಮರವಂತೆ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಮೃತಪಟ್ಟವರನ್ನು ವಿರಾಜ್ (28) ಮತ್ತು ಕೌಶಿಕ್ ಎಂದು ಗುರುತಿಸಲಾಗಿದ್ದು, ಕಾರ್ತಿಕ್ ಮತ್ತು ಸಂದೇಶ್ ಗಂಭೀರವಾಗಿ ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ರಾತ್ರಿ 1 ರಿಂದ 2 ಗಂಟೆ ಮಧ್ಯೆ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದೆ. ಕುಂದಾಪುರದಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಮಾರುತಿ ಶಿಫ್ಟ್ ಕಾರು ಮರವಂತೆ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೆದ್ದಾರಿಯಿಂದ ಹಾರಿ ಮರವಂತೆಯ ಸಮುದ್ರ ತಡೆಗೋಡೆಯನ್ನು ದಾಟಿ ಸಮುದ್ರಕ್ಕೆ ಬಿದ್ದಿದೆ.
ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರ್ ನಲ್ಲಿ ಸಿಲುಕಿ ಮೃತಪಟ್ಟ ಇಬ್ಬರ ಶವಗಳನ್ನು ಇಂದು ಬೆಳಗ್ಗೆ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರ ಸಹಾಯದಿಂದ ಹೊರತೆಗೆಯಲಾಗಿದೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್ಐ ವಿನಯ್ ಹಾಗೂ ಸಿಬ್ಬಂದಿಗಳು ಮತ್ತು ಅಗ್ನಿಶಾಮಕ ದಳದವರು ಭೇಟಿ ಭೇಟಿ ನೀಡಿದ್ದಾರೆ. ರಾತ್ರಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಮತ್ತು ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss