ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು: ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ದ.ಕ. ಜಿಲ್ಲಾಧಿಕಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಕಾರಿನಲ್ಲಿದ್ದ ಮಹಿಳೆಯ ತಲೆಗೆ ಗಾಯವಾಗಿದ್ದು ತಕ್ಷಣ ಹಿಂಬದಿಯಿಂದ ಬರುತ್ತಿದ್ದ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ನೋಡಿ ಸ್ಥಳಕ್ಕೆ ಧಾವಿಸಿ ತಹಶೀಲ್ದಾರ್ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಮನವಿಯತೆ ಮೇರೆದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಾಶಿಬೆಟ್ಟಿನಲ್ಲಿ ಇಂದು ನಡೆದಿದೆ.


ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಾಶಿಬೆಟ್ಟು ಎಂಬಲ್ಲಿ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೋಡುವ ರಭಸದಲ್ಲಿ ಹುಡೈಯ್ ಕಂಪನಿಯ ವೆನ್ಯೂ ತುಮಕೂರು ಜಿಲ್ಲೆಯ ಕಾರು ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದಿದ್ದು ಕಾರಿನಲ್ಲಿ ನಾಲ್ಕು ಜನ ಇದ್ದು ಅದರಲ್ಲಿ ಮಹಿಳೆಯ ತಲೆಗೆ ಗಾಯವಾಗಿತ್ತು ಅದೆ ದಾರಿಯಲ್ಲಿ ಚಾರ್ಮಾಡಿ ಕಡೆ ಹೋಗುತ್ತಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕಾರು ನಿಲ್ಲಿಸಿ ಸ್ಥಳಕ್ಕೆ ಹೋಗಿ ವಿಚಾರಿಸಿದಾಗ ಮಹಿಳೆ ಮಮತಾ(36) ತಲೆಗೆ ಗಾಯವಾಗಿತ್ತು, ತಕ್ಷಣ ಜೊತೆಯಲ್ಲಿ ಇದ್ದ ಬೆಳ್ತಂಗಡಿ ತಹಶೀಲ್ದಾರ್ ವಾಹನದಲ್ಲಿ ಕರೆದುಕೊಂಡು ಹೋಗಲು ಸೂಚಿಸಿದ್ದು ಅದರಂತೆ ತಹಶೀಲ್ದಾರ್ ಮಹೇಜ್.ಜೆ ವಾಹನ ಚಾಲಕ ಸಂತೋಷ್ ಕುಮಾರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ವಾಪಸ್ ಕಾರು ಬಿದ್ದ ಜಾಗಕ್ಕೆ ಕರೆತಂದು ಬಿಟ್ಟು ಮಾನವೀಯತೆ ಮೆರೆದಿದ್ದಾರೆ.
ಚಾಲಕ ಸಂತೋಷ್ ಕುಮಾರ್ ಜೊತೆ ಕಂದಾಯ ನಿರೀಕ್ಷಕ ಪ್ರತೀಷ್ , ವಿ.ಎ ನಾರಾಯಣ ಕುಲಾಲ್ ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!