ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರಕು ಸಾಗಾಟದ ಲಾರಿಯೊಂದು ನಿಯಂತ್ರಣ ತಪ್ಪಿ ನೇರ ಅಂಗಡಿಗೆ ನುಗ್ಗಿದ ಘಟನೆ ಬೆಳ್ತಂಗಡಿಯ ಆರಂಬೋಡಿ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಇಂಟರ್ಲಾಕ್ ಸಾಗಿಸುತ್ತಿದ್ದ ಈ ಲಾರಿ ನಿಯಂತ್ರಣ ತಪ್ಪಿ ರಾಜಣ್ಣ ಎಂಬವರ ಅಂಗಡಿಗೆ ನುಗ್ಗಿದೆ. ಇದರ ಪರಿಣಾಮವಾಗಿ ಲಾರಿಯಲ್ಲಿದ್ದ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಅಂಗಡಿ ಸಂಪೂರ್ಣ ಧ್ವಂಸಗೊಂಡಿದ್ದು, ವಾಹನದ ಮುಂಭಾಗಕ್ಕೂ ಹಾನಿಯಾಗಿದೆ. ಅಪಾರ ಮೌಲ್ಯದ ನಷ್ಟ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.