ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ನಾಯಿಯನ್ನು ಕೊಂದ ವ್ಯಕ್ತಿ ವಿರುದ್ಧ ಕೇಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಠಾಣೆ ನಗರದಲ್ಲಿ ಬೀದಿ ನಾಯಿಯನ್ನು ಹೊಡೆದು ಸಾಯಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಆರೋಪಿಯನ್ನು ಗೋಕುಲ್ ಥೋರ್ ಎಂದು ಗುರುತಿಸಲಾಗಿದೆ. ಗುರುವಾರ (ಸೆಪ್ಟೆಂಬರ್ 19) ಘೋಡ್‌ ಬಂದರ್​ ನ ಮೊಗರ್ಪಾಡಾದಲ್ಲಿ ಆರೋಪಿ ಗೋಕುಲ್ ಥೋರ್ ನಾಯಿಯನ್ನು ಕ್ರಿಕೆಟ್ ಬ್ಯಾಟ್‌ನಿಂದ ಕ್ರೂರವಾಗಿ ಹೊಡೆದಿದ್ದು, ತೀವ್ರವಾಗಿ ಗಾಯಗೊಳಿಸಿದ್ದಾನೆ. ಚಿಕಿತ್ಸೆ ಕೊಡಿಸಿದಾದರೂ ನಾಯಿ ಬದುಕುಳಿಯಲಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಭಾರತೀಯ ನ್ಯಾಯ ಸಂಹಿತಾ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 325 (ಪ್ರಾಣಿಗಳನ್ನು ಕೊಲ್ಲುವ ಅಥವಾ ಅಂಗವಿಕಲಗೊಳಿಸುವ ಮೂಲಕ ದುಷ್ಕೃತ್ಯ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!