ಬೂತ್‌ನಲ್ಲಿ ಬುರ್ಖಾ ತೆಗೆಯುವಂತೆ ಒತ್ತಾಯ, ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಸ್ಲಿಂ ಮಹಿಳೆಯರಿಗೆ ಬುರ್ಖಾ ತೆಗೆದು ವೋಟರ್‌ ಐಡಿ ತೋರಿಸುವಂತೆ ಒತ್ತಡ ಹೇರಿದ್ದಕ್ಕಾಗಿ ಹೈದರಾಬಾದ್‌ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ  ವಿರುದ್ಧ ಪ್ರಕರಣ ದಾಖಲಾಗಿದೆ.

ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ  ಸ್ಪರ್ಧಿಸುತ್ತಿರುವ ಮಾಧವಿ ಲತಾ ಅವರು ಸೋಮವಾರ ಮತದಾನ ಕೇಂದ್ರದಲ್ಲಿ ಮುಸ್ಲಿಂ ಮಹಿಳೆಯರ ಬಳಿ ಹೋಗಿ ಬುರ್ಖಾ ತೆಗೆಯುವಂತೆ ಹೇಳುತ್ತಿರುವ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಭಾರೀ ವಿವಾದ ಸೃಷ್ಟಿಸಿತ್ತು. ಮುಸ್ಲಿಂ ಮಹಿಳೆಯರಿಗೆ ಒತ್ತಾಯದಿಂದ ಬುರ್ಖಾ ತೆಗೆಸಿ, ಮುಖ ನೋಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಮಾಧವಿ ಲತಾ ಮಾತನಾಡಿದ್ದು, ನಾನು ಒಬ್ಬಳು ಅಭ್ಯರ್ಥಿಯಾಗಿದ್ದು, ಕಾನೂನಿನ ಪ್ರಕಾರ ಮುಖಕ್ಕೆ ಮಾಸ್ಕ್ ಇಲ್ಲದೆ ಗುರುತಿನ ಚೀಟಿಗಳನ್ನು ಪರಿಶೀಲಿಸುವ ಹಕ್ಕು ಇದೆ. ಮುಸ್ಲಿಂ ಮಹಿಳೆಯರ ಬಳಿ ತಮ್ಮ ಬುರ್ಖಾವನ್ನು ತೆಗೆಯುವಂತೆ ಕೇಳುವುದು ದೊಡ್ಡ ವಿಷಯವಲ್ಲ, ಏಕೆಂದರೆ ನಾನು ಪರುಷ ಅಲ್ಲ, ತಾನೂ ಮಹಿಳೆಯಾಗಿದ್ದೇನೆ. ಅಲ್ಲದೇ ಯಾರನ್ನೂ ಒತ್ತಾಯ ಮಾಡಿಲ್ಲ. ವಿನಮ್ರತೆಯಿಂದ ಕೇಳಿದ್ದೇನೆ. ಸುಮ್ಮನೆ ದೊಡ್ಡದು ಮಾಡಿ ಸಮಸ್ಯೆ ಮಾಡಬೇಕಿಲ್ಲ ಎಂದು ಹೇಳಿದ್ದಾರೆ.

ಮಾಧವಿ ಲತಾ ವಿರುದ್ಧ ಮಲಕಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!