4 ಮುದ್ದಾದ ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ಬಂದ ಚೀತಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಮೀಬಿಯಾದಿಂದ (Namibia) ಕಳೆದ ವರ್ಷ ಭಾರತಕ್ಕೆ ತರಲಾಗಿದ್ದ ಚೀತಾಗಳಲ್ಲೊಂದು 4 ಮರಿಗಳಿಗೆ (Cubs) ಜನ್ಮ ನೀಡಿದೆ.

ನಮೀಬಿಯಾದಿಂದ ಭಾರತಕ್ಕೆ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು (Cheetah) ವಿಶೇಷ ವಿಮಾನಗಳಲ್ಲಿ ಭಾರತಕ್ಕೆ ತರಲಾಗಿತ್ತು. ಇದೀಗ ಒಂದು ಚೀತಾ 4 ಮರಿಗಳಿಗೆ ಜನ್ಮ ನೀಡಿರುವ ಮಾಹಿತಿಯನ್ನು ಕೇಂದ್ರ ಸಚಿವ ಭೂಪೇಂದರ್ ಯಾದವ್ ತಿಳಿಸಿದ್ದಾರೆ.

ಮರಿಗಳ ಮುದ್ದಾದ ಚಿತ್ರಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಕಳೆದ 2 ದಿನಗಳ ಹಿಂದೆ ಭಾರತಕ್ಕೆ ತರಲಾಗಿದ್ದ 8 ಚೀತಾಗಳ ಪೈಕಿ ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದ ಸಾಶಾ ಹೆಸರಿನ 3 ವರ್ಷದ ಚೀತಾ ಮೃತಪಟ್ಟಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!