Wednesday, March 29, 2023

Latest Posts

ದೇಶದಲ್ಲೇ ಮೊದಲು ತೃತೀಯಲಿಂಗಿ ದಂಪತಿಗೆ ಮಗು ಜನನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಸುದ್ದಿಯಾಗಿದ್ದ ತೃತೀಯಲಿಂಗಿ ಗರ್ಭಿಣಿ(Transman Pregnancy) ವಿಚಾರ ಇದೀಗ ಸಿಹಿ ಸುದ್ದಿಯನ್ನು ನೀಡಿದ್ದು, ಭಾರತದ ಮೊದಲ ಟ್ರಾನ್ಸ್‌ಮ್ಯಾನ್ ತಂದೆಯಾಗಿದ್ದಾರೆ.

ಕೇರಳದ ತೃತೀಯಲಿಂಗಿ ದಂಪತಿಗಳು ಬುಧವಾರ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಿಸೇರಿಯನ್ ವಿಭಾಗದ ಮೂಲಕ ಬೆಳಿಗ್ಗೆ 9.30 ರ ಸುಮಾರಿಗೆ ಮಗು ಜನಿಸಿತು ಎಂದು ಜಿಯಾ ಪಾವಲ್ ಮಾಹಿತಿ ನೀಡಿದ್ದಾರೆ.

ಜಿಯಾ ಪಾವಲ್ ಸಂಗಾತಿ ಜಹ್ಹಾದ್ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಪಾವಲ್ ಹೇಳಿದರು. ಟ್ರಾನ್ಸ್ ವ್ಯಕ್ತಿ ನವಜಾತ ಶಿಶುವಿನ ಲಿಂಗ ಗುರುತನ್ನು ಬಹಿರಂಗಪಡಿಸಲು ನಿರಾಕರಿಸಿದರು ಮತ್ತು ಇದೀಗ ಅದನ್ನು ಸಾರ್ವಜನಿಕವಾಗಿ ತಿಳಿಸಲು ಬಯಸುವುದಿಲ್ಲ ಎಂದು ಹೇಳಿದರು.
ಈ ಹಿಂದೆಯೇ ದಂಪತಿ ಮಗುವನ್ನು ದತ್ತು ಪಡೆಯಲು ಪ್ರಯತ್ನಿಸಿದ್ದರು. ಆದರೆ, ದಂಪತಿ ಟ್ರಾನ್ಸ್‌ಜೆಂಡರ್‌ ಆಗಿರುವ ಕಾರಣ ಕಾನೂನು ಪ್ರಕ್ರಿಯೆಯು ಸವಾಲಾಗಿತ್ತು. ಹೀಗಿದ್ದೂ ಸಹದ್‌ಗೆ ಗಂಡಾಗಿದ್ದರೂ ಗರ್ಭಿಣಿಯಾಗುವ ಯೋಚನೆ ಬಂದಿತ್ತು.

ಜಿಯಾ ಪಾವಲ್ ಇತ್ತೀಚೆಗೆ Instagramನಲ್ಲಿ ಜಹ್ಹಾದ್ ಎಂಟು ತಿಂಗಳ ಗರ್ಭಿಣಿ ಎಂದು ಘೋಷಿಸಿದರು ನಾವು ನನ್ನ ತಾಯಿಯಾಗುವ ನನ್ನ ಕನಸು ಮತ್ತು ತಂದೆಯಾಗುವ ಅವನ ಕನಸನ್ನು ನನಸಾಗಿಸಿಕೊಳ್ಳಲಿದ್ದೇವೆ. ಎಂಟು ತಿಂಗಳ ಭ್ರೂಣವು ಈಗ (ಜಹಾದ್) ಹೊಟ್ಟೆಯಲ್ಲಿದೆ ಎಂದು ತಿಳಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!