ದೆಹಲಿ ವಿಮಾನ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚೀನಾ ಪ್ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೀನಾದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೆಲಸ ಕಳೆದುಕೊಂಡ ಕಾರಣದಿಂದ ಅಸಮಾಧಾನಗೊಂಡಿದ್ದ ಮಹಿಳೆ ಬಾತ್‌ರೂಂನಲ್ಲಿ ರೇಜರ್ ಬಳಸಿ ಸಾಯಲು ಯತ್ನಿಸಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಲೇಷ್ಯಾದ ಕೌಲಾಲಂಪುರಕ್ಕೆ ತೆರಳುತ್ತಿದ್ದ ಮಹಿಳೆ ಮಧ್ಯರಾತ್ರಿ ಶೌಚಾಲಯಕ್ಕೆ ತೆರಳಿ ಅಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರೇಜರ್‌ನಿಂದ ಕುತ್ತಿಗೆ ಹಾಗೂ ಕೈಗೆ ಇರಿದುಕೊಂಡಿದ್ದಾರೆ.

ಬಾಯ್‌ಫ್ರೆಂಡ್ ಜತೆ ಬ್ರೇಕಪ್ ಹಾಗೂ ಕೆಲಸದಿಂದ ತೆಗೆದ ಕಾರಣ ಜುಗುಪ್ಸೆಯಿಂದ ಹೀಗೆ ಮಾಡಿರುವುದಾಗಿ ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!