ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಕಾಲೇಜು ಉಪನ್ಯಾಸಕ

ಹೊಸದಿಗಂತ ವರದಿ, ಅಂಕೋಲಾ:
ಬೈಕ್ ಸ್ಕಿಡ್ ಆಗಿ ಬಿದ್ದು ಕಾಲೇಜು ಉಪನ್ಯಾಸಕರೋರ್ವರು ಸ್ಥಳದಲ್ಲಿಯೇ ಮೃತ ಪಟ್ಟ ದಾರುಣ ಘಟನೆ ತಾಲೂಕಿನ ಬೆಳಸೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.
ವಾಸರಕುದ್ರಿಗೆ ಗ್ರಾಮದ ನಿವಾಸಿ ಅರವಿಂದ ಬೀರಾ ಆಗೇರ (49) ಮೃತ ವ್ಯಕ್ತಿಯಾಗಿದ್ದು ಪಟ್ಟಣದ ಪಿ.ಎಂ.ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ಸಮಾಜಶಾಸ್ತ್ರದ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರು ಮನೆಯಿಂದ ಕಾಲೇಜಿಗೆ ತೆರಳಲು ಬೈಕ್ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಬೆಳಸೆ ಗ್ರಾಮ ಪಂಚಾಯಿತಿ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ತಲೆಗೆ ತೀವ್ರ ಪ್ರಮಾಣದಲ್ಲಿ ಗಾಯಗೊಂಡ ಕಾರಣ ಸ್ಥಳದಲ್ಲಿಯೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿದರಾದರೂ ವ್ಯಕ್ತಿ ಮೃತ ಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಪಿ.ಎಂ.ಜ್ಯೂನಿಯರ್ ಕಾಲೇಜಿನ ಪ್ರಾಚಾರ್ಯ ಪಾಲ್ಗುಣ ಗೌಡ, ನಿವೃತ್ತ ಪ್ರಾಚಾರ್ಯ ರವೀಂದ್ರ ಕೇಣಿ, ಎನ್. ಸಿ.ಸಿ ಕಮಾಂಡರ್ ಗಣಪತಿ ತಾಂಡೇಲ್ ಮತ್ತಿತರ ಸಿಬ್ಬಂದಿಗಳು ಆಸ್ಪತ್ರೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!