ಹೊಸದಿಗಂತ ವರದಿ ಮಡಿಕೇರಿ:
ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೊಮವಾರಪೇಟೆ ಸಮೀಪದ ಚೌಡ್ಲು ಗ್ರಾಮದಲ್ಲಿ ನಡೆದಿದೆ.
ಮಡಿಕೇರಿ ಪುಟಾಣಿ ನಗರದ ನಿವಾಸಿ ಕುಮಾರೇಶ್ ಎಂಬವರ ಪುತ್ರಿ ಕೀರ್ತನಾ (17) ಆತ್ಮಹತ್ಯೆಗೆ ಶರಣಾದವರು.
ಮಡಿಕೇರಿಯ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಈಕೆ ಶುಕ್ರವಾರ ಕುಶಾಲನಗರದ ಮೂಲಕ ಬಸ್‍ನಲ್ಲಿ ಸೋಮವಾರಪೇಟೆಗೆ ಆಗಮಿಸಿ, ಗಾಂಧಿನಗರದಲ್ಲಿರುವ ತನ್ನ ಅಜ್ಜಿಯ ಮನೆಗೆ ತೆರಳುವ ಮಾರ್ಗ ಮಧ್ಯೆ ಚೌಡ್ಲು ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆಮಾಡಿಕೊಂಡಿರುವುದಾಗಿ ಹೇಳಲಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸೋಮವಾರಪೇಟೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.