Monday, November 28, 2022

Latest Posts

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಂಟೈನರ್‌: ತಪ್ಪಿದ ಅನಾಹುತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುಜರಾತ್‌ನ ವಲ್ಸಾದ್‌ನ ಮೋತಿವಾಡ ಗ್ರಾಮದ ಬಳಿ NH48 ನಲ್ಲಿ ಕಂಟೈನರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. 5 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿವೆ. ಈ ಕುರಿತು ಮಾತನಾಡಿದ ಅಗ್ನಿಶಾಮಕ ಅಧಿಕಾರಿಯೊಬ್ಬರು ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಬಂದೆವು. ಟ್ರಕ್ ಮುಂಬೈನಿಂದ ಅಹಮದಾಬಾದ್‌ಗೆ ಶಾಂಪೂ ಮತ್ತು ಸುಗಂಧ ದ್ರವ್ಯದ ಬಾಟಲಿಗಳನ್ನು ಹೊತ್ತೊಯ್ಯುತ್ತಿತ್ತು.

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸತತ ಒಂದೂವರೆ ಗಂಟೆಗಳ ಕಾಲ ಬೆಂಕಿ ನಂದಿಸಿರುವುದಾಗಿ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!