ಇನ್ಸ್ಟಾಗ್ರಾಮ್‌ನಲ್ಲಿ ಫಾಲೋವರ್ಸ್‌ ಕಡಿಮೆ ಆಗಿದ್ದಕ್ಕೆ ಮನನೊಂದು ಕಂಟೆಂಟ್‌ ಕ್ರಿಯೇಟರ್‌ ಸೂಸೈಡ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿದ್ದು ಇನ್‌ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಕಡಿಮೆಯಾಗುತ್ತಿದ್ದಾರೆ ಎಂದು ಮಾನಸಿಕ ಖಿನ್ನತೆಗೊಳಗಾಗಿ ಕಂಟೆಂಟ್ ಕ್ರಿಯೇಟರ್ ಮಿಶಾ ಅಗರ್ವಾಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಕುರಿತು ಮೃತಳ ಸಹೋದರಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ತನ್ನ 25ನೇ ಹುಟ್ಟುಹಬ್ಬ ಸಮೀಪಿಸುತ್ತಿರುವಾಗ ಇನ್‌ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಕಡಿಮೆಯಾಗಿರುವುದು ಆಕೆಯನ್ನು ಮಾನಸಿಕ ಖಿನ್ನತೆ ಒಳಗಾಗುವಂತೆ ಮಾಡಿತ್ತು. ಏಪ್ರಿಲ್ ತಿಂಗಳ ಆರಂಭದಿಂದಲೂ ಆಕೆ ತೀವ್ರ ಒತ್ತಡದಲ್ಲಿದ್ದಳು. 1 ಮಿಲಿಯನ್ ಫಾಲೋವರ್ಸ್ ಗಳಿಸಬೇಕೆನ್ನುವುದು ಆಕೆಯ ಗುರಿಯಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಫಾಲೋವರ್ಸ್ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಇದೇ ಬೇಸರದಿಂದ ಆತ್ಮಹತ್ಯೆ ಶರಣಾಗಿದ್ದಾಳೆ ಎಂದು ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!