ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಒಂದು ಕೋವಿಡ್ ಪ್ರಕರಣ ದಾಖಲಾಗಿದೆ.
ಜಿಲ್ಲೆಯ ವೀರಾಜಪೇಟೆ ತಾಲೂಕಿನಲ್ಲಿ ಒಂದು ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 47,665ರಷ್ಟಾಗಿದೆ.
ಕಳೆದ 24ಗಂಟೆಗಳಲ್ಲಿ 4ಮಂದಿ ಗುಮುಖರಾಗಿದ್ದು, ಇದುವರೆಗೆ ಒಟ್ಟು 47,168ಮಂದಿ ಸಕು ಮುಕ್ತರಾದಂತಾಗಿದೆ. ಅಲ್ಲದೆ 451ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 46 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 16ಹಾಗೂ ಕೋವಿಡ್ ಪಾಸಿಟಿವಿಟಿ ದರ ಶೇ.0.17ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.