ಮದ್ಯ ಖರೀದಿಸಲು ಮಗುವನ್ನೇ ಮಾರಾಟ ಮಾಡಿದ ದಂಪತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:
 
ಮದ್ಯ ಖರೀದಿಸಲು ದಂಪತಿಗಳು ಸ್ವತಃ ಮಗುವನ್ನೇ ಮಾರಾಟ ಮಾಡಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಉತ್ತರ 24 ಪರಗಣ ಜಿಲ್ಲೆಯ ಪಾನಿಹತಿ ಮೂಲದ ದಂಪತಿ ಮದ್ಯ ಖರೀದಿಸಲು ಹಣ ಹೊಂದಿಸಲು ಆರು ತಿಂಗಳ ಮಗುವನ್ನು ಮಾರಾಟ ಮಾಡಿದ್ದಾರೆ.
ಪ್ರಕರಣದಲ್ಲಿ ದಂಪತಿ ಹಾಗು ಮಧ್ಯವರ್ತಿಯಾಗಿದ್ದ ಮಗುವಿನ ಅಜ್ಜನನ್ನೂ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಜೈದೇಬ್ ಚೌಧರಿ(ತಂದೆ), ಸತಿ ಚೌಧರಿ(ತಾಯಿ) ಮತ್ತು ಕನೈ ಚೌಧರಿ(ತಾತ) ಎಂದು ಗುರುತಿಸಲಾಗಿದೆ. ಅವರು ತಮ್ಮ ಮಗುವನ್ನು ಮಾರಾಟ ಮಾಡಿದ ವ್ಯಕ್ತಿಯ ಬಗ್ಗೆ ತಿಳಿಯಲು ಪ್ರಸ್ತುತ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ.

ದಂಪತಿಗಳು ದಿನವಿಡೀ ಮದ್ಯದ ಅಮಲಿನಲ್ಲಿ ಇರುತ್ತಾರೆ ಮತ್ತು ಆಗಾಗ್ಗೆ ಕುಟುಂಬದಲ್ಲಿ ಮತ್ತು ಕೆಲವೊಮ್ಮೆ ನೆರೆಹೊರೆಯವರೊಂದಿಗೆ ತೀವ್ರ ಜಗಳವಾಡುತ್ತಿದ್ದರು ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಮದ್ಯದ ಚಟ ತಮ್ಮ ಸ್ವಂತ ಮಗುವನ್ನು ಮಾರಾಟ ಮಾಡುವ ಹಂತಕ್ಕೆ ಹೋಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!