ಹೊಸದಿಗಂತ ಡಿಜಿಟಲ್ ಡೆಸ್ಕ್:
24 ವರ್ಷಗಳ ಬಳಿಕ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲೇ ಹೀನಾಯ ಸೋಲು ಕಂಡಿದೆ. ಹೀಗಾಗಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರ ವಿರುದ್ಧ ಹಲವು ಟೀಕೆಗಳು ಕೇಳಿ ಬಂದಿವೆ.
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋಲಿಕ ಬಳಿಕ ಟೀಮ್ ಇಂಡಿಯಾಗೆ ಬಿಗ್ ಶಾಕ್ ಕಾದಿದೆ. ಆಸ್ಟ್ರೇಲಿಯಾ ಸೀರೀಸ್ ನಂತರ ಟೀಮ್ ಇಂಡಿಯಾದ ಹಲವು ಹಿರಿಯ ಆಟಗಾರರಿಗೆ ತಂಡದಿಂದಲೇ ಗೇಟ್ಪಾಸ್ ನೀಡುವ ಸಾಧ್ಯತೆ ಇದೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಬಳಿಕ ಭಾರತ ತಂಡದ ಕೆಲವು ಅನುಭವಿ ಆಟಗಾರರ ಭವಿಷ್ಯ ನಿರ್ಧಾರವಾಗಲಿದೆ.
ತವರಿನಲ್ಲೇ ನ್ಯೂಜಿಲೆಂಡ್ ವಿರುದ್ಧ 0-3 ಅಂತರದ ಹೀನಾಯ ಸೋಲು ಕಂಡಿದ್ದು, ಟೀಮ್ ಇಂಡಿಯಾಗೆ ಭಾರೀ ಮುಖಭಂಗ ಆಗಿದೆ. ಹೀಗಾಗಿ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಟೆಸ್ಟ್ ಸರಣಿ ಸೋಲಿಗೆ ಕಾರಣ ಯಾರು? ಎಂದು ಪರಿಶೀಲಿಸಲಿದೆ.
ಇಬ್ಬರಿಗೆ ಗೇಟ್ಪಾಸ್
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಭಾರತ ತಂಡ ಆಡಲಿದೆ. ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಈ ಸರಣಿ ಭಾಗವಾಗಿದ್ದಾರೆ. ಈ ನಾಲ್ವರು ಆಟಗಾರರಲ್ಲಿ ಇಬ್ಬರಿಗೆ ಗೇಟ್ಪಾಸ್ ತಂಡದಿಂದ ನೀಡಲಾಗುವುದು.ಬಿಸಿಸಿಐ ಸೆಲೆಕ್ಷನ್ ಕಮಿಟಿ ಅಧ್ಯಕ್ಷ ಅಜಿತ್ ಅಗರ್ಕರ್ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ಹಿರಿಯ ಬಿಸಿಸಿಐ ಅಧಿಕಾರಿಗಳು, ಕ್ಯಾಪ್ಟನ್ ರೋಹಿತ್ ಶರ್ಮಾ, ಮುಖ್ಯ ಕೋಚ್ ಗೌತಮ್ ಗಂಭೀರ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋಲಿಗೆ ಕಾರಣವೇನು? ಆಸ್ಟ್ರೇಲಿಯಾ ವಿರುದ್ಧ ಪ್ರವಾಸಕ್ಕೆ ಪ್ಲಾನ್ ಏನು? ಅನ್ನೋ ಕುರಿತು ಚರ್ಚೆ ಆಗಲಿದೆ.