ವಿಶ್ವ ಚಾಂಪಿಯನ್ ತಂಡಕ್ಕೆ ಹೀನಾಯ ಸೋಲು: ಸರಣಿ ಗೆದ್ದ ಆಸ್ಟ್ರೇಲಿಯಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಸ್ಟ್ರೇಲಿಯಾ- ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಸರಣಿಯಲ್ಲಿ ಕಾಂಗರೂ ಪಡೆ 72 ರನ್‌ಗಳ ಜಯ ಸಾಧಿಸಿದ್ದು, ಈ ಮೂಲಕ ಸರಣಿಯನ್ನು 2-0 ಅಂತರದಲ್ಲಿ ಗೆದ್ದುಕೊಂಡಿದೆ.
ಹೊಸ ನಾಯಕ ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ, ತಂಡದ ವೇಗದ ಬೌಲರ್ ಜೋಶ್ ಹ್ಯಾಜಲ್‌ವುಡ್ ಆಸ್ಟ್ರೇಲಿಯಾವನ್ನು ಮುನ್ನಡೆಸಿದರು. ಈ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ 40 ಓವರ್‌ಗಳೊಳಗೆ ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಆಲೌಟ್ ಮಾಡುವುದರೊಂದಿಗೆ ಜಯ ಸಾಧಿಸಿದೆ.
ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ಅವರ ಅತ್ಯುತ್ತಮ ಇನ್ನಿಂಗ್ಸ್ ಆಧಾರದ ಮೇಲೆ ನಿಗದಿತ 50 ಓವರ್​ಗಳಲ್ಲಿ 280 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಆಂಗ್ಲರ ತಂಡವು ಕೇವಲ 208 ರನ್‌ಗಳಿಗೆ ಆಲೌಟ್ ಆಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!