ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬಜೆಟ್ನಲ್ಲಿ ಕರ್ನಾಟಕದ ಜನತೆಗೆ ‘ಚೊಂಬು’ ಕೊಟ್ಟಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ.
ಬಜೆಟ್ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು, ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ಆಯ್ಕೆಯಾಗಿರುವ ಹೊರತಾಗಿಯೂ ತಮ್ಮ ರಾಜ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ನಿರ್ಮಲಾ ಸೀತಾರಾಮನ್ ಬೆಂಗಳೂರಿನವರಾಗಿದ್ದು, ಕರ್ನಾಟಕಕ್ಕೆ ಏನನ್ನೂ ಕೊಟ್ಟಿಲ್ಲ. ತಮ್ಮ ಸರ್ಕಾರವನ್ನು ಉಳಿಸುವ ಸಲುವಾಗಿ ಅವರು ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಭರಪೂರ ಅನುದಾನ ನೀಡಿದ್ದಾರೆ. ಅವರು ತಮ್ಮ ಮೈತ್ರಿಯ ಬಗ್ಗೆ ಮಾತ್ರ ಕಾಳಜಿ ವಹಿಸಿದ್ದಾರೆ. ಹೀಗಾಗಿ I.N.D.I.A ಮೈತ್ರಿಕೂಟ ಇರುವ ರಾಜ್ಯಗಳಿಗೆ ಅನ್ಯವಾಯವಾಗಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.