ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮಳೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದ ಪ್ರವಾಸಿ ತಾಣದ ಸುತ್ತ ನಿಷೇಧಾಜ್ಞೆ ವಿಧಿಸಲಾಗಿದೆ. ಕಳೆದ ಕೆಲ ದಿನಗಳಿಂದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿ ಪ್ರವಾಸಿಧಾಮದಲ್ಲಿ ಅಪಾಯದ ಕಾವು ಹೆಚ್ಚಾಗಿದೆ.
ಪ್ರಸ್ತುತ ಮಳವಳ್ಳಿ ತಹಸೀಲ್ದಾರ್ ಕೆ.ಎನ್. ಲೋಕೇಶ್ ಮುತ್ತತ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಿದ್ದಾರೆ.
ಕಾವೇರಿ ನದಿ ಅಪಾಯದ ಮಟ್ಟ ದಾಟುತ್ತಿದೆ. ಪ್ರವಾಸಿ ತಾಣವು ಕಾವೇರಿ ನದಿಯ ದಡದಲ್ಲಿದೆ. ಪ್ರವಾಸಿ ತಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವುದರಿಂದ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈಗಾಗಲೇ ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ 30 ಮಂದಿ ಮೃತಪಟ್ಟಿರುವ ಬಗ್ಗೆ ವರದಿಗಳಾಗಿವೆ.