Saturday, December 20, 2025

ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಿದ್ದ ಸವಾರ ಚಿಕಿತ್ಸೆ ಫಲಿಸದೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತವಾಗಿ ಬೈಕ್‌ನಿಂದ ಬಿದ್ದ ಸವಾರ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಬೆಂಗಳೂರು ಹೊರವಲಯ ನೆಲಮಂಗಲ ನಗರದ ಸುಭಾಷ್ ನಗರದ ಬಜಾಜ್ ಶೋ ರೂಮ್ ಬಳಿ ಅವಘಡ ಸಂಭವಿಸಿದೆ. ಇಸ್ಲಾಂಪುರದ ನಿವಾಸಿ ತಬ್ರೇಜ್ ಸಾವನ್ನಪ್ಪಿರುವ ಯುವಕ. ಬೈಕ್‌ನಲ್ಲಿ ತೆರಳುವ ವೇಳೆ ಗುಂಡಿ ತಪ್ಪಿಸಲು ಹೋಗಿ ಅಪಘಾತವಾಗಿ ಗಂಭೀರವಾಗಿ ಗಾಯಗೊಂಡಿದ್ದ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. 

ಪೈಪ್‌ಲೈನ್ ಮಾಡಲು ತೆಗೆದಿದ್ದ ಗುಂಡಿ ಸಂಪೂರ್ಣವಾಗಿ ಮುಚ್ಚದ ಪರಿಣಾಮ ಅಪಘಾತವಾಗಿದೆ. ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಚಿಕಿತ್ಸೆ ಫಲಿಸದೇ ಯುವತಿ ಮೃತಪಟ್ಟಿದ್ದಾನೆ. ಗುಂಡಿ ತಪ್ಪಿಸಲು ಹೋಗಿ ಅಪಘಾತವಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

error: Content is protected !!