ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರೀತಿಸಿದ ಯುವಕನೊಂದಿಗೆ ಮಗಳು ಮನೆಬಿಟ್ಟು ಹೋಗಿದ್ದಕ್ಕೆ ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮೈಸೂರು ಜಿಲ್ಲೆ ಹೆಚ್ಡಿ ಕೋಟೆ ತಾಲೂಕಿನ ಬಂದನೂರಿನಲ್ಲಿ ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಮಗಳು ಹರ್ಷಿತಾ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಪ್ರೀತಿಸಿದ ಯುವಕನೊಂದಿಗೆ ಮನೆಬಿಟ್ಟು ಹೋಗಿದ್ದಳು. ಈ ಹಿನ್ನೆಲೆ ಮನನೊಂದ ಕುಟುಂಬ ಆತ್ಮಹತ್ಯೆಯ ನಿರ್ಧಾರ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.
ಬೂದನೂರು ಕೆರೆಯ ಏರಿ ಮೇಲೆ ಬೈಕ್ ಹಾಗೂ ಮೂವರ ಚಪ್ಪಲಿಗಳು ಪತ್ತೆಯಾಗಿದೆ. ಸದ್ಯ ನಾಪತ್ತೆ ಆಗಿರುವ ಮೂವರಿಗಾಗಿ ಹುಡುಕಾಟ ಮುಂದುವರಿದಿದೆ.