ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿಯ ವಸತಿ ಗೃಹದಲ್ಲಿ ಸರ್ಕಾರಿ ಉದ್ಯೋಗಿ ಮೃತದೇಹ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಸಿಎಚ್‌ಸಿಯ ಡಿ ಗ್ರೂಪ್ ಉದ್ಯೋಗಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕುಂಚಾವರಂ ಗ್ರಾಮದಲ್ಲಿ ನಡೆದಿದೆ. ಡಿ ಗ್ರೂಪ್ ಮಹಿಳಾ ಸಿಬ್ಬಂದಿ ಮಾಲಾಶ್ರೀ (29) ಮೃತ ದುದೈರ್ವಿ.
ಕುಂಚಾವರಂನ ಸಮುದಾಯ ಆರೋಗ್ಯ ಕೇಂದ್ರದ ವಸತಿ ಗೃಹದಲ್ಲೇ ಸಾವಿಗೆ ಶರಣಾಗಿದ್ದಾರೆ. ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವುದು ತಿಳಿದುಬಂದಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.