ಅಮೆರಿಕದ ಬಂಗಲೆಯಲ್ಲಿ ಭಾರತೀಯ ಮೂಲದ ಕುಟುಂಬದ ಮೃತದೇಹ ಪತ್ತೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಮೂಲದ ಶ್ರೀಮಂತ ದಂಪತಿ ಮತ್ತು ಅವರ ಹದಿಹರೆಯದ ಮಗಳು ಅಮೆರಿಕದ ಮ್ಯಾಸಚೂಸೆಟ್ಸ್‌ನಲ್ಲಿರುವ ಅವರ 5 ಮಿಲಿಯನ್ ಡಾಲರ್ ಮೌಲ್ಯದ ಬಂಗಲೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ರಾಕೇಶ್ ಕಮಲ್(57), ಅವರ ಪತ್ನಿ ಟೀನಾ(54) ಮತ್ತು ಅವರ 18 ವರ್ಷದ ಮಗಳು ಅರಿಯಾನಾ ಅವರ ಶವಗಳು ಅವರ ಡೋವರ್ ಮ್ಯಾನ್ಷನ್‌ನಲ್ಲಿ ಗುರುವಾರ ರಾತ್ರಿ 7:30 ರ ಸುಮಾರಿಗೆ ಪತ್ತೆಯಾಗಿವೆ ಎಂದು ನಾರ್ಫೋಕ್ ಡಿಸ್ಟ್ರಿಕ್ಟ್ ಅಟಾರ್ನಿ ಮೈಕೆಲ್ ಮೊರಿಸ್ಸೆ ಹೇಳಿದ್ದಾರೆ.

ಡೋವರ್ ಮ್ಯಾಸಚೂಸೆಟ್ಸ್‌ನ ರಾಜಧಾನಿ ಬೋಸ್ಟನ್ ಡೌನ್‌ಟೌನ್‌ನಿಂದ ಸುಮಾರು 32 ಕಿ.ಮೀ. ದೂರದಲ್ಲಿದೆ. ರೀನಾ ಮತ್ತು ರಾಕೇಶ್ ಕಮಲ್ ಈ ಹಿಂದೆ ಎಜುನೋವಾ ಎಂಬ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದರು. ಕೌಟುಂಬಿಕ ಹಿಂಸಾಚಾರದಿಂದಾಗಿ ಈ ಹತ್ಯೆ ನಡೆದಿರಬಹುದೇ ಎಂಬ ಶಂಕೆ ಮೂಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ರಾಕೇಶ್ ಕಮಲ್ ಶವದ ಬಳಿ ಬಂದೂಕು ಪತ್ತೆಯಾಗಿದೆ ಎಂದು ವರದಿಗಳು ಹೇಳಿವೆ.

ಕುಟುಂಬದ ಮೂವರು ಸದಸ್ಯರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆದರೆ ಈ ಕೃತ್ಯ ಎಸಗಿದವರು ಯಾರು ಎನ್ನುವ ವಿವರ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಘಟನೆ ಕೊಲೆ ಅಥವಾ ಆತ್ಮಹತ್ಯೆ ಎನ್ನುವುದು ವೈದ್ಯಕೀಯ ಪರೀಕ್ಷೆಯ ಬಳಿಕ ತಿಳಿದು ಬರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!