Saturday, October 1, 2022

Latest Posts

ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಬಹುರಾಷ್ಟ್ರೀಯ ಕಂಪನಿಗಳೊಂದಿಗೆ ಚರ್ಚಿಸಿದ ನಿರಾಣಿ ನೇತೃತ್ವದ ನಿಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಪ್ರಸಕ್ತ ವರ್ಷದ ನವೆಂಬರ್ 2- 3 ಮತ್ತು 4 ರಂದು ರಾಜ್ಯದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸುವ ಗುರಿಯೊಂದಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಡಾ. ಮುರುಗೇಶ ಆರ್ ನಿರಾಣಿ ನೇತೃತ್ವದ ನಿಯೋಗ ಅಮೆರಿಕಕ್ಕೆ ಭೇಟಿ ನೀಡಿದೆ.
ಈ ನಿಟ್ಟಿನಲ್ಲಿ ಶುಕ್ರವಾರ ವಾಷಿಂಗ್ಟನ್‌ನಲ್ಲಿ ಬಹುರಾಷ್ಟ್ರೀಯ ಕಂಪನಿಗಳಾದ ನೈಕಿ ಹಾಗೂ ಹನಿವೆಲ್‌ ಮುಖ್ಯಸ್ಥರನ್ನು ಭೇಟಿಯಾಗಿ ಚರ್ಚೆ ನಡೆಸಲಾಗಿದೆ. ಹನಿವೆಲ್‌ ಕಂಪನಿಯ ಸರ್ಕಾರಿ ವ್ಯವಹಾರಗಳ ಉಪಾಧ್ಯಕ್ಷ ಸ್ಟೇಸಿ ಬರ್ನಾರ್ಡ್ ಮತ್ತು ಕರ್ಟ್ನಿ ಕೌಪರ್ ಅವರನ್ನು ಭೇಟಿಯಾದ ಸಚಿವರ ನೇತೃತ್ವದ ನಿಯೋಗ, ರಾಜ್ಯದಲ್ಲಿ ಬಂಡವಾಳ ಹೂಡಿಕೆಯ ಕುರಿತಾಗಿ ಚರ್ಚೆ ನಡೆಸಿತು. ಕರ್ನಾಟಕದಲ್ಲಿ 7,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಯ ವಿಸ್ತರಣೆ ಬಗ್ಗೆ ಈ ವೇಳೆ ಮಾತುಕತೆ ನಡೆದಿದೆ.
ಆ ಬಳಿಕ ನಡೆದ ಮತ್ತೊಂದು ಮಾತುಕತೆಯಲ್ಲಿ, ಕರ್ನಾಟಕದಲ್ಲಿ ನೈಕಿ ಉತ್ಪಾದನಾ ಘಟಕ ಮತ್ತು ಸೆಂಟರ್ ಆಫ್ ಎಕ್ಸಲೆನ್ಸ್‌ನ ವಿಸ್ತರಣೆ ಸಂಬಂಧ ಕಂಪನಿಯ ಉಪಾಧ್ಯಕ್ಷ ಜೆನ್ನಿಫರ್ ಬೆಂಡಾಲ್, ಸರ್ಕಾರಿ ವ್ಯವಹಾರಗಳ ನಿರ್ದೇಶಕ ಮೈಕೆಲ್ ಮೆಕ್‌ಸ್ವೈನ್ ಅವರ ಜತೆ ಸಚಿವರು ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಡಾ. ಇವಿ ರಮಣ ರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!