ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದ್ದು, ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಇಂದು ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ ಸಲ್ಲಿಸುವ ಪರ್ವ. ರಾಷ್ಟ್ರದ ನಿರ್ಮಾಣಕ್ಕಾಗಿ ಹಲವರು ಪ್ರಾಣತ್ಯಾಗ ಮಾಡಿದ್ದಾರೆ. ದೇಶದ ಸ್ವಾತಂತ್ರ್ಯ ಸೇನಾನಿಗಳಿಗೆ ಹೃದಯಪೂರ್ವಕ ನಮನ. ಭಾರತದ ಸ್ವಾತಂತ್ರ್ಯ ಸೇನಾನಿಗಳಿಗೆ ನಾವು ಋಣಿಯಾಗಿದ್ದೇವೆ. ರಾಷ್ಟ್ರದ ರಕ್ಷಣೆಗೆ ಯೋಗದಾನ ನೀಡಿದವರಿಗೂ ನನ್ನ ನಮನಗಳು ಎಂದರು.
ದೇಶದಲ್ಲಿ ಪ್ರಕೃತಿ ವಿಕೋಪದಿಂದ ಸಾಕಷ್ಟು ಜನರು ಮೃತಪಟ್ಟಿದ್ದಾರೆ. ಮೃತರ ಕುಟುಂಬ ಹಾಗೂ ಸಂತ್ರಸ್ತರ ಜೊತೆ ಸದಾ ನಾವಿರುತ್ತೇವೆ. ‘2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿಯಾಗಿದೆ. ದೇಶದ 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.