Wednesday, December 10, 2025

ದೇವರ ದರುಶನಕ್ಕೆ ಬಂದಿದ್ದ ಭಕ್ತನ ದಾರುಣ ಅಂತ್ಯ: ಬೆಟ್ಟ ಹತ್ತುವ ವೇಳೆ ಕಾಲು ಜಾರಿ ಬಿದ್ದು ವೃದ್ಧ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇವಣಸಿದ್ದೇಶ್ವರ ಬೆಟ್ಟದಲ್ಲಿ ದೇವರ ದರುಶನಕ್ಕಾಗಿ ಬಂದಿದ್ದ ವೃದ್ಧನೊಬ್ಬರು ಬೆಟ್ಟ ಹತ್ತುವ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಬಿಡದಿ ಹೋಬಳಿಯ ಕೆಂಪನಹಳ್ಳಿ ನಿವಾಸಿ ರೇವಣ್ಣ (65) ಮೃತ ವ್ಯಕ್ತಿ.

ಕುಟುಂಬದವರ ಜೊತೆಗೂಡಿ ಪೂಜಾ ಕಾರ್ಯಕ್ಕಾಗಿ ರೇವಣಸಿದ್ದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ ಅವರು, ಮೆಟ್ಟಿಲು ಮೂಲಕ ಮೇಲಕ್ಕೆ ತೆರಳುತ್ತಿದ್ದ ವೇಳೆ ಕಾಲು ಜಾರಿ ಆಳವಾದ ಕಂದಕಕ್ಕೆ ಬಿದ್ದಿದ್ದಾರೆ. ಎತ್ತರದಿಂದ ಬಿದ್ದ ಪರಿಣಾಮವಾಗಿ ಅವರಿಗೆ ಗಂಭೀರ ಗಾಯಗಳಾಗಿದ್ದು, ರಕ್ಷಿಸುವಷ್ಟರಲ್ಲಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಾಯದಿಂದ ಕಂದಕದಲ್ಲಿದ್ದ ಶವವನ್ನು ಮೇಲಕ್ಕೆತ್ತಲಾಗಿದ್ದು, ನಂತರ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

error: Content is protected !!