ಅಟಲ್‌ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವೈದ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತುವೆಯಿಂದ ಜಿಗಿದು ವೈದ್ಯೆಯೊಬ್ಬರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಿಳೆ ಮಾರ್ಚ್ 18ರ ಮಧ್ಯಾಹ್ನ ಟ್ಯಾಕ್ಸಿಯಲ್ಲಿ ಪ್ರಯಾಣ ಬೆಳೆಸಿದ್ದರು. ಅಟಲ್‌ ಸೇತುವೆ ಬಳಿ ಟ್ಯಾಕ್ಸಿ ನಿಲ್ಲಿಸುವಂತೆ ಚಾಲಕನಿಗೆ ಹೇಳಿದ್ದ ವೈದ್ಯೆ (38) ಏಕಾಏಕಿ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನು ಗಮನಿಸಿದ ಡ್ರೈವರ್‌ ಗಾಬರಿಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಈವರೆಗೂ ಶವ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣ ಸಂಬಂಧ ಮೃತ ಮಹಿಳೆಯ ಮನೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಈ ವೇಳೆ ಪೊಲೀಸರಿಗೆ ಡೆತ್ ನೋಟ್‌ ಪತ್ತೆಯಾಗಿದೆ. ‘ನಾನು 8 ವರ್ಷಗಳಿಂದ ಖಿನ್ನತೆಗೆ ಒಳಗಾಗಿದ್ದು, ಅಟಲ್‌ ಸೇತುವೆಯಿಂದ ಜಿಗಿದು ನನ್ನ ಜೀವನವನ್ನು ಅಂತ್ಯಗೊಳಿಸಲು ಬಯಸುತ್ತೇನೆ. ಟ್ಯಾಕ್ಸಿ ಚಾಲಕ ಸೇರಿದಂತೆ ನನ್ನ ಸಾವಿಗೆ ಯಾರು ಕಾರಣರಲ್ಲ’ ಎಂದು ಸಂತ್ರಸ್ತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ನಡುವೆ ಅದೇ ದಿನ ಥಾಣೆ ಜಿಲ್ಲೆಯ ಭೋಯಿವಾಡ ಪೊಲೀಸ್ ಠಾಣೆಯಲ್ಲಿ ಮಹಿಳೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಕಾಣೆ ಪ್ರಕರಣ ದಾಖಲಿಸಿರುವುದು ಬೆಳಕಿಗೆ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!