ಅ. 7 ರಂದು ವಿಚಾರಣೆಗೆ ಹಾಜರಾಗುವುದಿಲ್ಲ: ED ಸಮನ್ಸ್ ಗೆ ಡಿ.ಕೆ. ಶಿವಕುಮಾರ್ ರಿಯಾಕ್ಷನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ಟೋಬರ್ 7 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ (ED) ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವುದಿಲ್ಲ, ಬೇರೊಂದು ದಿನ ಹಾಜರಾಗಲು ಅವಕಾಶ ಕೋರಿ ಅಧಿಕಾರಿಗಳಿಗೆ ಮನವಿ ಮಾಡುತ್ತೇನೆ. ಕಾರಣಾಂತರಗಳಿಂದ ಅಕ್ಟೋಬರ್ 7 ರಂದು ವಿಚಾರಣೆಗೆ ಇಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೊದಲು ಮಾಹಿತಿ ನೀಡಿದ್ದ ಡಿ.ಕೆ. ಶಿವಕುಮಾರ್. ನನಗೆ ಮತ್ತು ನನ್ನ ತಮ್ಮ ಡಿ.ಕೆ. ಸುರೇಶ್ ಗೆ ಇಡಿಯವರು ಮತ್ತೆ ನೋಟಿಸ್ ನೀಡಿದ್ದಾರೆ. ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ಹೇಳಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!