ಮೂರು ವರ್ಷದ ಮಗುವಿನ ಮೇಲೆ ನಾಯಿ ದಾಳಿ.. ಬಾಲಕನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೂರು ವರ್ಷದ ಮಗುವಿನ ಮೇಲೆ ಹುಚ್ಚು ನಾಯಿ ದಾಳಿ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಶಾಲೆಯ ಹಿಂಭಾಗದಲ್ಲಿ ನಡೆದಿದೆ.

ಗಂಗಾಧರ ಗಂಭೀರವಾಗಿ ಗಾಯಗೊಂಡಿರುವ ಮೂರು ವರ್ಷದ ಮಗು. ಹುಚ್ಚು ನಾಯಿ ದಾಳಿಯಿಂದ ಈ ಬಾಲಕನ ತುಟಿ, ಕೆನ್ನೆ, ಬಲಗಣ್ಣು ಮತ್ತು ಕಿವಿಗೆ ಗಾಯವಾಗಿದೆ.

ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹುಚ್ಚುನಾಯಿ ಹಾವಳಿ ಹೆಚ್ಚುತ್ತಿದ್ದರೂ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!