ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕೂಲಿ ಕಾರ್ಮಿಕರಿಗೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಶಿರಗನಹಳ್ಳಿ ರೈತರೊಬ್ಬರು ವಿಮಾನಯಾನ ಮಾಡಿಸಿದ್ದಾರೆ.
ಶಿವಮೊಗ್ಗ ಏರ್‌ಪೋರ್ಟ್ ಗೋವಾ ಗೋವಾಕ್ಕೆ ವಿಮಾನ ಪ್ರಯಾಣದ ಉಡುಗೊರೆ ನೀಡಿದ್ದಾರೆ. ಕೃಷಿ ಕಾರ್ಮಿಕರ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಈ ರೈತನ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.
ವಿಶ್ವನಾಥ್ ತೋಟಕ್ಕೆ ಕೂಲಿ ಕೆಲಸಕ್ಕೆ ಬರುತ್ತಿದ್ದ ಮಹಿಳೆಯರು, ಒಮ್ಮೆಯಾದರೂ ವಿಮಾನದಲ್ಲಿ ಪ್ರಯಾಣ ಬೆಳೆಸಬೇಕೆಂಬ ಆಸೆ ವ್ಯಕ್ತಪಡಿಸಿದ್ದರು. ಹೀಗಾಗಿ ಮಹಿಳಾ ಕಾರ್ಮಿಕರ ಆಸೆಯಂತೆ ಶಿವಮೊಗ್ಗ ಏರ್‌ಪೋರ್ಟ್ ಗೋವಾದವರೆಗೂ ವಿಮಾನ ಪ್ರಯಾಣ ಮಾಡಿಸಿದ್ದಾರೆ. ವಿಮಾನಯಾನ ಭಾಗ್ಯ ನೀಡಿದ ರೈತನ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ತಾನು ಯೋಜನೆ ರೂಪಿಸಿದಂತೆ ತಮ್ಮ ಜಮೀನಿನಲ್ಲಿ ಕೆಲಸಕ್ಕೆ ಬರುತ್ತಿದ್ದ 10 ಮಹಿಳಾ ಕಾರ್ಮಿಕರಿಗೆ ಹಾಗೂ ತಮ್ಮನ್ನು ಸೇರಿದಂತೆ 11 ಜನರಿಗೆ ವಿಮಾನದಲ್ಲಿ ಗೋವಾಗೆ ಹೋಗಲು ಟಿಕೆಟ್ ಬುಕಿಂಗ್ ಮಾಡಿದ್ದಾರೆ. ನಂತರ, ಎಲ್ಲ ಕಾರ್ಮಿಕರನ್ನು ತನ್ನೊಂದಿಗೆ ಹತ್ತಿದ ವಿಮಾನ ನಿಲ್ದಾಣವಾದ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿದ್ದಾರೆ.
ಎಲ್ಲ ಮಹಿಳೆಯರೂ ಒಂದೇ ತರಹದ ಸೀರೆ ಧರಿಸಿಕೊಂಡು ಶಿವಮೊಗ್ಗದಿಂದ ಗೋವಾಕ್ಕೆ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ. ತಾವು ಪ್ರತಿದಿನ ಹೊಲದಲ್ಲಿ ಕೆಲಸ ಮಾಡುವಾಗ ತಲೆ ಎತ್ತಿ ಆಕಾಶದಲ್ಲಿ ನೋಡುತ್ತಿದ್ದ ವಿಮಾನದಲ್ಲಿ ನಾವೇ ಪ್ರಯಾಣ ಮಾಡುತ್ತಿದ್ದೇವೆ ಎಂಬ ಸಂತಸಗೊಳ್ಳುತ್ತಿದ್ದರು . ಇದೀಗ ಅವರೇ ವಿಮಾನದಲ್ಲಿ ಹಾರಾಡಿ ಫುಲ್ ಖುಷ್ ಆಗಿದ್ದಾರೆ.