ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನ ಬಂದಿಳಿದಿದ್ದು, ಮಾಜಿ ಸಿಎಂ ಬಿಎಸ್‌ವೈ ಸಂತಸ ಹಂಚಿಕೊಂಡಿದ್ದಾರೆ.
ಶಿವಮೊಗ್ಗದಲ್ಲಿ ಏರ್‌ಪೋರ್ಟ್ ಬಹುವರ್ಷದ ಕನಸಾಗಿದೆ. ಬೆಂಗಳೂರು ನಂತರ ಅತಿ ಉದ್ದದ ರನ್‌ವೇ ಹೊಂದಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ವಿಮಾನ ಹಾರಾಟ ಆರಂಭವಾಗಿದೆ.
ಮೊದಲ ವಿಮಾನದಲ್ಲಿ ಪ್ರಯಾಣಿಸಿದ್ದು ಸಂತಸವಾಗಿದೆ ಎಂದು ಬಿಎಸ್‌ವೈ ಹೇಳಿದ್ದಾರೆ. ಶಿವಮೊಗ್ಗ ಭಾಗದ ರೈತರಿಗೂ ನಾವು ಧನ್ಯವಾದ ಹೇಳಲೇಬೇಕು, ಅವರ ಸಹಕಾರ ಇಲ್ಲದೆ ಇದು ಅಸಾಧ್ಯವಾಗಿತ್ತು ಎಂದು ಹೇಳಿದ್ದಾರೆ.
ಕಳೆದ ಫೆ.27ರಂದು, ಬಿಎಸ್‌ವೈ ಜನ್ಮದಿನದಂದು ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದ್ದರು.