ಮೂರು ದಶಕಗಳ ಕನಸು ನನಸು: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಯೋಜನೆಗೆ ಎದುರಾಗಿದ್ದ ಅನೇಕ ವಿಘ್ನಗಳು ನಿವಾರಣೆಯಾಗಿ, ಕೊನೆಗೂ ಕೇಂದ್ರ ಸರಕಾರ ಈ ಯೋಜನೆಗೆ ಗ್ರೀನ್​​ಸಿಗ್ನಲ್ ನೀಡಿದೆ.

ಕಾಮಗಾರಿ ಆರಂಭವಾಗಿ ಹುಬ್ಬಳ್ಳಿಯಿಂದ ಕಲಘಟಗಿವರೆಗೆ ಸುಮಾರು 34 ಕಿ.ಮೀ ಮಾರ್ಗವನ್ನು ಕೂಡ ನಿರ್ಮಿಸಲಾಗಿತ್ತು. ಆದರೆ ಪರಿಸರವಾದಿಗಳ ತೀವ್ರ ವಿರೋಧದಿಂದಾಗಿ ಈ ಯೋಜನೆ ನಿಂತು ಹೋಗಿತ್ತು. ಕೊನೆಗೆ ಸುಪ್ರಿಂ ಕೋರ್ಟ್​ನಲ್ಲಿಯೂ ವಿಚಾರಣೆ ನಡೆದು, ಈ ಯೋಜನೆಗೆ ಗ್ರೀನ್ ಸಿಗ್ನಲ್ ಸಿಕ್ಕಿತ್ತು.

ಆದರೆ, ಈಗ 17 ಸಾವಿರ ಕೋಟಿ ರೂ. ದಾಟಿದೆ. ಇತ್ತೀಚಿಗಷ್ಟೇ ನೈರುತ್ಯ ರೈಲ್ವೆಯು 17,147 ಕೋಟಿ ರೂಪಾಯಿ ವೆಚ್ಚದ ಪರಿಷ್ಕೃತ ವಿಸ್ತ್ರತ ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಿತ್ತು. ಹಲವು ವಿರೋಧ, ವಿವಾದಗಳ ನಡುವೆಯೇ ಈ ಬೃಹತ್‌ ಮೊತ್ತದ ಯೋಜನೆಗೆ ಕೇಂದ್ರ ಸರಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಅನ್ನೋ ಕುತೂಹಲವೂ ಮೂಡಿತ್ತು. ಆದರೆ, ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ ಅವರು ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಅನುಮತಿ ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!