Sunday, December 3, 2023

Latest Posts

ಮಂಗಳೂರು ಕಮಿಷನರ್ ಹೆಸರಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಡಿಮ್ಯಾಂಡ್

ಹೊಸದಿಗಂತ ವರದಿ, ಮಂಗಳೂರು:

ಮಂಗಳೂರು ಪೊಲೀಸ್ ಆಯುಕ್ತರ ಹೆಸರಲ್ಲೂ ನಕಲಿ ಖಾತೆಗಳನ್ನು ತೆರೆದು ಹಣ ಸುಲಿಗೆಗೆ ಯತ್ನಿಸಿದ್ದು, ಈ ಕುರಿತು ನಕಲಿ ಫೋನ್ ಕರೆಗಳ ಬಗ್ಗೆ ಎಚ್ಚರ ವಹಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ನನ್ನ ಹೆಸರಿನಲ್ಲಿಯೂ ನಕಲಿ ಕರೆ ಮಾಡಿ ವಂಚಿಸುವ ಯತ್ನ ನಡೆದಿದೆ. ನಕಲಿ ಕರೆಗಳಿಗೆ ಯಾರು ಕೂಡ ಸ್ಪಂದಿಸಬಾರದು ಎಂದು ಅವರು ತಿಳಿಸಿದ್ದಾರೆ.

ವ್ಯಕ್ತಿಯೋರ್ವ ತನ್ನ ವಾಟ್ಸಪ್ ಪ್ರೊಫೈಲ್ ನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಪೊಟೋ ಹಾಕಿ ತನ್ನನ್ನು ಪೊಲೀಸ್ ಆಯುಕ್ತನೆಂದು ಪರಿಚಯಿಸಿಕೊಂಡು ಪೊಲೀಸ್ ಅಧಿಕಾರಿಗಳು ಸೇರಿದಂತೆ ಆಯುಕ್ತರ ಹಲವು ಮಂದಿ ಪರಿಚಿತರಿಗೆ ಸಂದೇಶ ಕಳುಹಿಸಿದ್ದಾನೆ.‌

‘ನಾನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್. ನಾನು ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ಹಣ ಬೇಕಾಗಿದೆ. ನನ್ನ ಯುಪಿಐ ವರ್ಕ್ ಮಾಡುತ್ತಿಲ್ಲ. ತುರ್ತಾಗಿ ಹಣ ಟ್ರಾನ್ಸ್ ಫರ್ ಮಾಡಿ. ಒಂದು ತಾಸಿನೊಳಗೆ ವಾಪಸ್ ಮಾಡುತ್ತೇನೆ’ಎಂದು ತಿಳಿಸಿದ್ದಾನೆ. ಅಲ್ಲದೆ ಕರೆ ಕೂಡ ಮಾಡಿದ್ದಾನೆ. ಇದು ನಕಲಿ ಯಾಗಿದ್ದು, ಯಾರೂ ಕೂಡ ಸ್ಪಂದಿಸಬಾರದು. ಅನಾಮಿಕ ಕರೆಗಳನ್ನು ನಂಬಬಾರದು ಎಂದು ಕಮಿಷನರ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!