ಪಂದ್ಯದ ನಡುವೆ ಮೈದಾನಕ್ಕೆ ನುಗ್ಗಿ ಕೊಹ್ಲಿ ಪಾದ ಮುಟ್ಟಿ‌ದ ಅಭಿಮಾನಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದೋರ್‌ ಸ್ಟೇಡಿಯಂನಲ್ಲಿ ನಡೆದ ಭಾರತ vs ಅಫ್ಘಾನಿಸ್ತಾನ್​ ನಡುವಿನ ಟಿ20 ಪಂದ್ಯದ ವೇಳೆ ಅಭಿಮಾನಿಯೊಬ್ಬ ಭದ್ರತೆ ಉಲ್ಲಂಘಿಸಿ ವಿರಾಟ್ ಕೊಹ್ಲಿಯ ಪಾದ ಮುಟ್ಟಿ ಬಳಿಕ ತಬ್ಬಿಕೊಂಡ ಘಟನೆ ನಡೆದಿದೆ.

ಎರಡನೇ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತವು ಆರು ವಿಕೆಟ್‌ಗಳ ಸುಲಭ ಜಯ ಸಾಧಿಸಿತು. ಬ್ಯಾಟಿಂಗ್ ಹಾಗೂ‌ ಬೌಲಿಂಗ್‌ ಎರಡರಲ್ಲೂ ಅಬ್ಬರಿಸಿದ ರೋಹಿತ್‌ ಶರ್ಮಾ ಬಳಗವು ಸರಣಿಯನ್ನು ತನ್ನದಾಗಿಸಿಕೊಂಡಿತು.

ವಿರಾಟ್ ಕೊಹ್ಲಿ ವರ್ಷದ ಬಳಿಕ ಟಿ20 ಕ್ರಿಕೆಟ್‌ಗೆ ಈ ಪಂದ್ಯದೊಂದಿಗೆ ಮರಳಿದರು. ಹೀಗಾಗಿ ಅಫ್ಘಾನಿಸ್ತಾನದ ಇನ್ನಿಂಗ್ಸ್‌ ವೇಳೆ ಅಭಿಮಾನಿಯೊಬ್ಬ ಭದ್ರತೆಯನ್ನು ಮೀರಿ ಮೈದಾನಕ್ಕೆ ಹಾರಿಬಂದು ಕೊಹ್ಲಿಯನ್ನು ಭೇಟಿಯಾಗಿದ್ದಾನೆ. ಬೌಂಡರಿ ಲೈನ್‌ ಬಳಿ ನಿಂತು ಫೀಲ್ಡಿಂಗ್‌ ಮಾಡುತ್ತಿದ್ದ ಕೊಹ್ಲಿಯ ಪಾದಗಳನ್ನು ಮುಟ್ಟಿ ಅಪ್ಪಿಕೊಂಡು ತನ್ನ ಜೀವನ ಮಹತ್ವದ ಆಸೆಯನ್ನು ತೀರಿಸಿಕೊಂಡಿದ್ದಾನೆ.

ಇದನ್ನು ಕಂಡು ಮಧ್ಯಪ್ರದೇಶ ಪೊಲೀಸರು ಮೈದಾನಕ್ಕೆ ನುಗ್ಗಿದ ಅಭಿಮಾನಿಯನ್ನು ಬಂಧಿಸಿದ್ದಾರೆ. ಬಳಿಕ ಯುವಕನನ್ನು ತುಕೋಗಂಜ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಸದ್ಯ ಯುವಕನ ವಿಚಾರಣೆ ನಡೆಸಲಾಗುತ್ತಿದ್ದು, ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!