ದಿಗಂತ ವರದಿ ಬಸವಕಲ್ಯಾಣ:
ಸಾಲಬಾಧೆಯಿಂದ ಬೆಸತ್ತ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಲಸೂರ ತಾಲೂಕಿನ ಬೇಲೂರ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ನಿವಾಸಿ ರೈತ ಕಾಶಪ್ಪ ವೀರಭದ್ರಪ್ಪ ವೀರಣ್ಣನವರ್ (72) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ.
ವಿವಿಧ ಬ್ಯಾಂಕ್ಗಳಲ್ಲಿ ಸುಮಾರು ಎರಡು ಲಕ್ಷಕ್ಕೂ ಅಧಿಕ ಸಾಲವಿದ್ದು, ಸಾಲ ಬಾಧೆಯಿಂದ ಬೇಸತ್ತು ಮಂಗಳವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ತನ್ನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುದ್ದಿ ತಿಳಿದ ಹುಲಸೂರ ಠಾಣೆಯ ಪಿಎಸ್ಐ ನಾಗೇಂದ್ರ ಅವರ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಹುಲಸೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.