ಹೊಸದಿಗಂತ ವರದಿ, ಮೈಸೂರು:
ಸಾಲ ಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಜಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಲೇಟ್ ಮಂಜು ಎಂಬುವರ ಮಗ ಮನೋಜ್ (೨೭) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಗ್ರಾಮದಲ್ಲಿ ಗುತ್ತಿಗೆ ಆಧಾರದ ಮೇಲೆ ಪಡೆದಿದ್ದ ಜಮೀನಿನಲ್ಲಿ ಖಾಸಗಿ ಬ್ಯಾಂಕ್ ಹಾಗೂ ಕೈ ಸಾಲ ಮೂಲಕ ೫ ಲಕ್ಷ ರೂ. ಸಾಲ ಪಡೆದು ಬೆಳೆ ಬೆಳೆದಿದ್ದರು. ಆದರೆ ಸಾಲ ಮಾಡಿ ಬೆಳೆದ ಬೆಳೆ ಸರಿಯಾಗಿ ಬಾರದ ಹಿನ್ನೆಲೆಯಲ್ಲಿ ಮತ್ತು ಖಾಸಗಿ ಬ್ಯಾಂಕುಗಳಿoದ ನಿರಂತರವಾಗಿ ಸಾಲ ಮರುಪಾವತಿ ಮಾಡುವಂತೆ ಒತ್ತಾಯ ಮಾಡುತ್ತಿದ್ದರಿಂದ ಖಿನ್ನತೆಗೆ ಒಳಗಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡಿದ್ದಾರೆ. ಮೃತನ ಸಂಬoಧಿಕರು ಮನೆಗೆ ಬಂದು ನೋಡಿ, ತಕ್ಷಣ ಮನೋಜ್‌ರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆಮೃತಪಟ್ಟಿದ್ದಾರೆ.
ಈ ಘಟನೆಗೆ ಸಂಬoಧಿಸಿದoತೆ ಎಚ್.ಡಿ.ಕೋಟೆ ಪೊಲೀಸ್ ಠಾಣೆಗೆ ಮೃತರ ತಾಯಿ ಜ್ಯೋತಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.