Tuesday, February 27, 2024

ಸಾಲಬಾಧೆ ತಾಳಲಾರದೆ ವಿದ್ಯುತ್ ತಂತಿ ಸ್ಪರ್ಶಿಸಿ ಆತ್ಮಹತ್ಯೆಗೆ ಶರಣಾದ ರೈತ

ಹೊಸದಿಗಂತ ವರದಿ, ಮೈಸೂರು:
ಸಾಲಬಾಧೆ ತಾಳಲಾರದೇ ರೈತನೊಬ್ಬ ವಿದ್ಯುತ್ ತಂತಿ ಸ್ಪರ್ಶಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ಕೆಲ್ಲೂರು ಗ್ರಾಮದಲ್ಲಿ ನಡೆದಿದೆ.
ಕೆಲ್ಲೂರು ಗ್ರಾಮದ ರೈತ ಮಂಜುನಾಥ (47) ಆತ್ಮಹತ್ಯೆ ಮಾಡಿಕೊಂಡವರು. ಇವರು 6 ಲಕ್ಷರೂ. ಸಾಲ ಮಾಡಿದ್ದು, ಬೆಳೆ ವಿಫಲಗೊಂಡಿದ್ದರಿಂದ ಮನನೊಂದು ತಮ್ಮ ಜಮೀನಿನಲ್ಲಿ ಮೋಟಾರ್‌ಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ಮೃತರ ಪತ್ನಿ ನೇತ್ರಾವತಿ ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!