June 28, 2026
Sunday, June 28, 2026
spot_img

ಮಾಣಿ – ಮೈಸೂರು ಹೆದ್ದಾರಿಯಲ್ಲಿ ಕಾರು, ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ: ಕಾಸರಗೋಡು ನಿವಾಸಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬೊಳುಬೈಲು ಎಂಬಲ್ಲಿ ಕಾರು ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.

ಮೃತ ವ್ಯಕ್ತಿಯನ್ನು ಸತೀಶ ಕೆ. (45) ಎಂದು ಗುರುತಿಸಲಾಗಿದ್ದು, ಇವರು ಕಾಸರಗೋಡಿನ ಕಿನ್ನಿಂಗಾರು ನೆಟ್ಟಣಿಗೆ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.

ಅಪಘಾತ ಯಾವ ಕಾರಣಕ್ಕೆ ನಡೆದಿದೆ ಎಂದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !