ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲೆ ಯತ್ನ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದ ತಂದೆಯೊಬ್ಬರು ತಮ್ಮ ಮೂವರು ಮಕ್ಕಳ ಜೊತೆ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಪ್ರಾಣಬಿಟ್ಟಿದ್ದಾರೆ.
ಗುಜರಾತ್‌ನ ಬೊಟಾಡ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಮೃತರನ್ನು ಮಂಗಾಭಾಯಿ ಮಿಜುದಾ(42), ಸೋನಂ(17), ರೇಖಾ(21) ಹಾಘೂ ಜಿಗ್ನೇಶ್(19) ಎಂದು ಗುರುತಿಸಲಾಗಿದೆ.
ನಿನ್ನೆ ಸಂಜೆ ನಿಂಗಲಾ ಹಾಗೂ ಆಲಂಪುರ ನಿಲ್ದಾಣದ ನಡುವೆ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ನಾಲ್ವರು ಪ್ರಾಣಬಿಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.