ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿನಿಪ್ರಿಯರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಹೌದು, ಇಂದು ಕನ್ನಡದಲ್ಲಿ ಹೆಚ್ಚೆಚ್ಚು ಸಿನಿಮಾಗಳು ರಿಲೀಸ್ ಆಗುತ್ತಿದ್ದು, ಪ್ರೇಕ್ಷಕ ಯಾವ ಸಿನಿಮಾ ನೋಡಬೇಕು ಎಂದು ಕಾಯುತ್ತಿದ್ದಾರೆ.
ನಿರ್ಮಾಪಕ ಕೆ ಮಂಜು ಅವರ ಪುತ್ರ ಶ್ರೇಯಸ್ ಮಂಜು ಹಾಗೂ ಕಣ್ಸನ್ನೆ ಚೆಲುವೆ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿರುವ ‘ವಿಷ್ಣುಪ್ರಿಯ’ ಸಿನಿಮಾ ಇಂದು ಬಿಡುಗಡೆ ಆಗಿದೆ. ಸರಳ ಪ್ರೇಮಕತೆಯ ಜೊತೆಗೆ ಆಕ್ಷನ್ ಅನ್ನು ಸಹ ಒಳಗೊಂಡಿರುವ ಈ ಸಿನಿಮಾವನ್ನು ವಿಕೆ ಪ್ರಕಾಶ್ ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಮಾಡಿರುವುದು ಕೆ ಮಂಜು, ಗೋಪಿ ಸುಂದರ್ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೈಲರ್ ಮತ್ತು ಹಾಡುಗಳು ಗಮನ ಸೆಳೆದಿವೆ.
‘ಶಾನುಭೋಗರ ಮಗಳು’, ರಘು ಭಟ್, ಕಾವ್ಯಾ ಶೆಟ್ಟಿ, ವಿಜಯ್ ರಾಘವೇಂದ್ರ ನಟನೆಯ ‘ನಿಮಗೊಂದು ಸಿಹ ಸುದ್ದಿ’, ಅಂಜನ್ ನಾಗೇಂದ್ರ, ವಿನಯಾ ರೈ ಇನ್ನಿತರರು ನಟಿಸಿರುವ ‘ಎಲ್ಲೋ ಜೋಗಪ್ಪ ನಿನ್ ಅರಮನೆ’, ಸೋಮ ವಿಜಯ್, ತೇಜಸ್ವಿ ರೆಡ್ಡಿ ನಟನೆಯ ‘ನಂಗೂ ಲವ್ವಾಗಿದೆ’, ಯೂಟ್ಯೂಬ್ ಸ್ಟಾರ್ ಮಲ್ಲು ಜಮಖಂಡಿ ನಟನೆಯ ‘ವಿದ್ಯಾ ಗಣಪತಿ’, ‘ಒಲವಿನ ಪಯಣ’, ‘ಗಗನ ಕುಸುಮ’, ‘ನವಮಿ’ ಕನ್ನಡ ಸಿನಿಮಾಗಳು ಈ ವಾರ ಬಿಡುಗಡೆ ಆಗುತ್ತಿವೆ.