Saturday, January 10, 2026

SHOCKING | ಬರೀ 200 ರೂ. ವಿಚಾರಕ್ಕೆ ಪತಿ-ಪತ್ನಿ ನಡುವೆ ಗಲಾಟೆ, ಮನನೊಂದು ಹೆಂಡತಿ ಸೂಸೈಡ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
 
200 ರೂ. ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ ನಡೆದು ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಎರಡು ಮಕ್ಕಳ ತಾಯಿ ಸುಮಾ (30) ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಮಾ 8 ವರ್ಷಗಳ ಹಿಂದೆ ಚಂದ್ರಶೇಖರ್ ಜೊತೆ ಮದುವೆಯಾಗಿದ್ದರು. ಧರ್ಮಸ್ಥಳ ಸ್ವಸಹಾಯ ಸಂಘದ ಕಂತು ಕಟ್ಟಲೆಂದು ಸುಮಾ ಗಂಡನಿಗೆ ಕಾಣದಂತೆ 1,300 ರೂ. ಮನೆಯಲ್ಲಿಟ್ಟಿದ್ದರು. 1,300 ರೂ. ಪೈಕಿ ಚಂದ್ರಶೇಖರ್ ಸಬೂಬು ಹೇಳಿ 200 ರೂ. ಸ್ವಂತ ಖರ್ಚಿಗೆ ಬಳಸಿದ್ದ. ಈ ಸಂಬಂಧ ಶುಕ್ರವಾರ ಬೆಳಗ್ಗೆ ಇಬ್ಬರ ನಡುವೆ ಗಲಾಟೆ ನಡೆದಿತ್ತು.

ಪತಿ ಹಾಗೂ ಅತ್ತೆ ಕೆಲಸಕ್ಕೆ ಹೋಗಿದ್ದ ವೇಳೆ ಸುಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಊಟಕ್ಕೆಂದು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಸುಮಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಶವಾಗಾರಕ್ಕೆ ರವಾನಿಸಲಾಗಿದೆ.

error: Content is protected !!