ಕ್ಷುಲ್ಲಕ ಕಾರಣಕ್ಕೆ ಜಗಳ,ಮಹಿಳಾ ಸಿಬ್ಬಂದಿ ಮುಂದೆ ಪ್ಯಾಂಟ್ ಬಿಚ್ಚಿದ ವಿದ್ಯಾರ್ಥಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ವಿಶ್ವವಿದ್ಯಾಲಯದಲ್ಲಿ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವೇಳೆ ವಿದ್ಯಾರ್ಥಿಯೋರ್ವ ಮಹಿಳಾ ಸಿಬ್ಬಂದಿ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ.

ವಿದ್ಯಾರ್ಥಿ ಅಸಭ್ಯವಾಗಿ ವರ್ತನೆ ಮಾಡಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಪರಸ್ಪರ ಅವಾಜ್ ಹಾಕಿಕೊಂಡು ಗಲಾಟೆಗೆ ಮುಂದಾಗಿದ್ದರು. ಈ‌ ವೇಳೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರು ಮಧ್ಯ ಪ್ರವೇಶಿಸಿ ಜಗಳ ಬಿಡಿಸಿದ್ದಾರೆ. ಬಳಿಕ ಮಹಿಳಾ ಸೆಕ್ಯೂರಿಟಿ ಗಾರ್ಡ್​ ಒಂದು ಗುಂಪನ್ನು ಕ್ಯಾಂಪಸ್ ಒಳಗಡೆ ಕರೆದುಕೊಂಡು ಮತ್ತೊಂದು ಗುಂಪನ್ನು ಹೊರಗಡೆ ಕಳುಹಿಸಿದ್ದಾರೆ.

ಈ ವೇಳೆ ಹೋರಗಡೆ ಹೋದ ಒಂದು ಗುಂಪಿನಲ್ಲಿದ್ದ ವಿದ್ಯಾರ್ಥಿಯೋರ್ವ ಕಾಲೇಜು ಗೇಟ್​ ಮುಂದೆ ಮಹಿಳಾ ಸೆಕ್ಯೂರಿಟಿ ಗಾರ್ಡ್ ಎದರು ಪ್ಯಾಂಟ್ ಬಿಚ್ಚಿ ಅನುಚಿತವಾಗಿ ವರ್ತಿಸಿದ್ದಾನೆ.

ಬಳಿಕ ಎರಡೂ ಗುಂಪಿನ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಎಚ್ಚರಿಕೆ ನೀಡಿ ಕಳುಹಿಸಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!