ಸಿಗರೇಟ್ ಸೇದುವ ವಿಚಾರಕ್ಕೆ ಗೆಳೆಯರ ಮಧ್ಯೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಗರೇಟ್ ಸೇದುವ ವಿಚಾರಕ್ಕೆ ಗೆಳೆಯರ ಮಧ್ಯೆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿತ್ರದುರ್ಗದ ಚಂದ್ರವಳ್ಳಿ ಬಳಿ ನಡೆದಿದೆ.

ಮೃತನನ್ನು ಮಹೆಬೂಬ್ (33) ಎಂದು ಗುರುತಿಸಲಾಗಿದೆ. ಸ್ನೇಹಿತರು ಸೇರಿಕೊಂಡು ಪಾರ್ಟಿ ಮಾಡುತ್ತಿದ್ದರು. ಆ ವೇಳೆ ಸಿಗರೇಟು ಸೇದುವ ವಿಚಾರಕ್ಕೆ ಆರಂಭವಾದ ಗಲಾಟೆ ಸಾಲದ ವಿಚಾರಕ್ಕೆ ತಿರುಗಿ ಮೆಹಬೂಬ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೈಕ್‌ನಿಂದ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಬಿಂಬಿಸಲು ಯತ್ನಿಸಿದ್ದಾರೆ. ಆ ಮೃತದೇಹವನ್ನು ಮೆಹಬೂಬ್ ಮನೆಗೆ ಸಾಗಿಸಿ, ಪತ್ನಿಯ ಸಮ್ಮುಖದಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಈ ಸಂಬಂಧ ಚಿತ್ರದುರ್ಗದ ಕೋಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!