February 22, 2026
Sunday, February 22, 2026
spot_img

ದೈವದ ಕೃಪೆಯಿಂದಲೇ ಸಿಕ್ಕಿದ ಸಿನಿಮಾ: ಪತಿಯ ಹೊಸ ಸಿನಿಮಾ ಬಗ್ಗೆ ಪ್ರಗತಿ ಶೆಟ್ಟಿ ಭಾವುಕ ನುಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿರುವ ‘ಜೈ ಹನುಮಾನ್’ ಚಿತ್ರದ ಚಿತ್ರೀಕರಣಕ್ಕೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ವಿಶೇಷವೆಂದರೆ, ಹನುಮಂತನ ಜನ್ಮಸ್ಥಳವೆಂದು ಕರೆಯಲ್ಪಡುವ ಅಂಜನಾದ್ರಿ ಬೆಟ್ಟದಲ್ಲಿಯೇ ಇಂದು ಮುಹೂರ್ತ ಸಮಾರಂಭ ನೆರವೇರಿದೆ.

ನಿರ್ದೇಶಕ ಪ್ರಶಾಂತ್ ವರ್ಮಾ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಮೆಗಾ ಪ್ರಾಜೆಕ್ಟ್‌ನಲ್ಲಿ ನಟ ರಿಷಬ್ ಶೆಟ್ಟಿ ಅವರು ಹನುಮಂತನ ಪಾತ್ರಕ್ಕೆ ಜೀವ ತುಂಬುತ್ತಿದ್ದಾರೆ. ‘ಪುಷ್ಪ’ದಂತಹ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನೀಡಿದ ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸುತ್ತಿದೆ.

ಈ ವಿಶೇಷ ಸಮಾರಂಭದಲ್ಲಿ ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಪಾಲ್ಗೊಂಡಿದ್ದರು. ಪೂಜಾ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಿಷಬ್ ಅವರಿಗೆ ಈ ಸಿನಿಮಾ ಸಿಕ್ಕಿರುವುದು ಹನುಮಂತ ದೇವರ ಪರಮ ಆಶೀರ್ವಾದದಿಂದಲೇ. ದೈವದ ಅನುಗ್ರಹವಿಲ್ಲದೆ ಇದು ಸಾಧ್ಯವಾಗುತ್ತಿರಲಿಲ್ಲ” ಎಂದು ಸಂತಸ ಹಂಚಿಕೊಂಡರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !