ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಪಾಟ್ನಾದ ದನಾಪುರ ಪ್ರದೇಶದಲ್ಲಿ ಕಾರ್ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಅಗ್ನಿಶಾಮಕ ದಳದಿಂದ 20-25 ಅಗ್ನಿಶಾಮಕ ವಾಹನಗಳನ್ನು ನೇಮಿಸಿ ಬೆಂಕಿಯನ್ನು ಹತೋಟಿಗೆ ತರಲಾಯಿತು.
ಡಿಐಜಿ ಮೃತ್ಯುಂಜಯ್ ಕುಮಾರ್ ಚೌಧರಿ ಮಾತನಾಡಿ, “ಬೆಂಕಿಯ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ಇಲಾಖೆ ತಕ್ಷಣ ಕ್ರಮ ಕೈಗೊಂಡಿತು. 20-25 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತರಲಾಗಿದೆ” ಎಂದು ಹೇಳಿದರು.
ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.