ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಂಪಿ ಉತ್ಸವದ ವೇದಿಕೆ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಅಗ್ನಿ ಶಾಮಕದಳ ಸಿಬ್ಬಂದಿಯು ಸಮಯ ಪ್ರಜ್ಞೆ ಮೆರೆದು ಬೆಂಕಿ ನಂದಿಸಿದ್ದಾರೆ.
ಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಉತ್ಸವ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಿದ್ದಾರೆ. ಇಂದು ಕಾರ್ಯಕ್ರಮದ ಮುಖ್ಯ ವೇದಿಕೆ ಗಾಯತ್ರಿ ಪೀಠದ ಪಕ್ಕದ ಬಿದರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಿಗರೇಟ್ ಸೇದಿ ಎಸೆದಿರುವ ಹಿನ್ನೆಲೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.